ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳುಗಳು ಕಳೆದರೂ ಸಹ ಇದುವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲ ಕೂಡಲೇ ಅತಿಥಿ ಉಪನ್ಯಾಸಕರ ನೇಮಕಾತಿಯನ್ನ ಮಾಡುವಂತೆ ಒತ್ತಾಯಿಸಿ.ಶುಕ್ರವಾರ ಶಿವಮೊಗ್ಗ ನಗರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ಬಡ ಕೂಲಿ ಕಾರ್ಮಿಕರ ಮಕ್ಕಳು ಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿದ್ದಾರೆ. ಆದರೆ ಪ್ರತಿವರ್ಷ ಈ ರೀತಿ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.