ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ತೊನಶ್ಯಾಳ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ಉತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭಾಗವಹಿಸಿ, ಮಾತನಾಡಿದರು. ಇದಕ್ಕೂ ಮೊದಲು ವಿಘ್ನ ನಿವಾರಕ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು. ಇದೇ ವೇಳೆ ಶಾಸಕ ಯತ್ನಾಳ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು...