ಆರೋಗ್ಯ ವರ್ಧಕವಾಗಿರುವ ತೆಂಗು ಬೆಳೆಯ ಮೌಲ್ಯವರ್ಧನೆಗೆ ವಿಷಯ ತಜ್ಞರ ಚಿಂತನೆಗಳನ್ನು ರೈತರು ಅಳವಡಿಸಿಕೊಂಡು ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು ಹಾಗೂ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ವತಿಯಿಂದ “ವಿಶ್ವ ತೆಂಗು ದಿನಾಚರಣೆ” ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ತೆಂಗು ಬೆಳೆಯಲ್ಲಿ ಪ್ರಮುಖ ಕೀಟ, ರೋಗಬಾಧೆಯ ಸಮಗ್ರ ನಿರ್ವಹಣೆ’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.