ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಹೆಸರು ಕಾಳು ಬೆಳೆಗೆ ವರ್ತಕರು ತಮಗೆ ಬೇಕಾದಂತೆ ದರ ನಿಗದಿ ಮಾಡುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸವದತ್ತಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ರೈತರು ಪ್ರತಿಭಟನೆ ನಡೆಸಿದ್ದು. ಎಪಿಎಂಸಿ ಮಾರುಕಟ್ಟೆಯಲ್ಲಿ ವರ್ತಕರು ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.