ಹುಣಸೆಕಟ್ಟೆ ಗ್ರಾಮದಲ್ಲಿ ನಟ ಕಿಚ್ಚ ಸುದೀಪ್ ಹುಟ್ಟುಹಬ್ಬವನ್ನ ಸಡಗರದಿಂದ ಆಚರಣೆ ಮಾಡಲಾಯಿತು. ಸ್ನೇಹಲೋಕ ಯುವಕರ ತಂಡ ಹಾಗೂ ಗ್ರಾಮಸ್ತರ ವತಿಯಿಂದ ಚಿತ್ರನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬವನ್ನ ಬಲು ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಿದ್ದು ಗ್ರಾಮದ ಪ್ರಮುಖ ವೃತ್ತದಲ್ಲಿ ಸುದೀಪ್ ಅವರ ದೊಡ್ಡದಾದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಟ್ರ್ಯಾಕ್ಟರ್ ನಲ್ಲಿ ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.