ಕೋಣಗಳನ್ನು ಮಾಂಸಕ್ಕಾಗಿ ಸಾಗಾಟ ಮಾಡುತ್ತಿದ್ದವರನ್ನು ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಅಮಾಸೆ ಬೈಲು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಹುಲಿಕಲ್ ಘಾಟಿ ಕಡೆಯಿಂದ ಚೆಕ್ ಪೋಸ್ಟ್ ಕಡೆ ಬರುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದಾಗ ಎರಡು ಕೋಣಗಳು ಪತ್ತೆಯಾಗಿದ್ದು ಅಕ್ರಮ ಜಾನುವಾರು ಸಾಗಾಟದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.