ಮದ್ದೂರು ತಾಲ್ಲೂಕು ಕಾರ್ಕಹಳ್ಳಿ ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಹೊನಲು ಬೆಳಕಿನ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿಗೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಚಾಲನೆ ನೀಡಿದರು. ನಂತರ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಮಾತನಾಡಿ, ಗಂಡೆದೆಯ ಬಲಶಾಲಿ ಆಟವಾದ ಕಬ್ಬಡ್ಡಿಯನ್ನು ಗ್ರಾಮೀಣ ಜನತೆ ಪೋಷಿಸಿ ಬೆಳೆಸದೆ ಹೋದಲ್ಲಿ ಆಟವು ನಶಿಸಿಹೋಗುವುದರಲ್ಲಿ ಯಾವುದೇ ಸಂಶಯವಿಲ್ಲವೆಂದು ತಿಳಿಸಿದರು. ಇಂತಹ ವೇಳೆಯಲ್ಲಿ ಕಾರ್ಕಹಳ್ಳಿ ಗ್ರಾಮದಲ್ಲಿ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿರುವುದು ನಿಜಕ್ಕೂ ಸಂತಸ ತಂದಿದೆ. ಈ ರೀತಿ ಗ್ರಾಮಾಂತರ ಪ್ರದೇಶದಲ್ಲಿ ಈ ಕ್ರೀಡೆಯನ್ನು ಹೆಚ್ಚು-ಹೆಚ್ಚು ಆಯೋಜಿಸುವ ಮೂಲಕ ಗ್ರಾಮೀಣ ಕ್ರೀಡೆಯನ್ನು