ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ನೇಮಕ ಆಗಿಲ್ಲ, ವಿದ್ಯಾರ್ಥಿಗಳು ಸರಿಯಾಗಿ ತರಗತಿ ನಡೆಯದೇ ಗೊಂದಲದಲ್ಲಿದ್ದಾರೆ. ಸರ್ಕಾರ ಕೂಡಲೇ ವಿದ್ಯಾರ್ಥಿಗಳು ಸಮಸ್ಯೆಗೆ ಸ್ಪಂದಿಸಬೇಕು ಎಂದು ಪ್ರತಿಭಟನೆ.