ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಶನಿವಾರ ಆಚರಿಸಿದರು. ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದಂತಹ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಮಾಡುವ ಮೂಲಕ ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಆಚರಿಸಿದರು. ಪ್ರಾರ್ಥನೆ ಬಳಿಕ ಪರಸ್ಪರ ಶುಭ ವಿನಿಮಯ ಮಾಡಿಕೊಂಡರು.ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್. ಕೈಗೊಳ್ಳಲಾಗಿದೆ