Download Now Banner

This browser does not support the video element.

ಚಳ್ಳಕೆರೆ: ಬೇಡರೆಡ್ಡಿಹಳ್ಳಿ ಗ್ರಾ.ಪಂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಲ್ಲಮ್ಮ ಅವಿರೋಧವಾಗಿ ಆಯ್ಕೆ

Challakere, Chitradurga | Aug 28, 2025
ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಬೆಳಿಗ್ಗೆ 11 ಗಂಟೆಗೆ ಚುನಾವಣೆ ನಡೆಸಲಾಯಿತು. ಈ ವೇಳೆ ಬೇಡರೆಡ್ಡಿಹಳ್ಳಿ ಗ್ರಾಮದ ಯಲ್ಲಮ್ಮ ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಂಜಗೆರೆ ಗ್ರಾಮದ ಪದ್ಮಕ್ಕ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯೆ ಯಲ್ಲಮ್ಮ ಮಾತ್ರ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಯಲ್ಲಮ್ಮ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಹೂವಿನ ಹಾರ ಹಾಕಿ, ಸಿಹಿ ಹಂಚಿ ಗೆಲುವನ್ನ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಂಜಗೆರೆ ಅರುಣ್ ಕುಮಾರ್ ಸೇರಿ ಹಲವರಿದ್ದರು
Read More News
T & CPrivacy PolicyContact Us