ಶಿಡ್ಲಘಟ್ಟ ನಗರದಲ್ಲಿ ಧರ್ಮಸ್ಥಳಕ್ಕೆ ಕಳಂಕ ತರುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಸೋಮವಾರ ನಡೆಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ಮಾತನಾಡಿ ಇತ್ತೀಚಿಗೆ ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ ಕಳಂಕ ತರುವ ನಿಟ್ಟಿನಲ್ಲಿ ಕೆಲವರು ಯೋಜಿತವಾಗಿ ಕಾರ್ಯಪ್ರವೃತ್ತರಾಗಿದ್ದು, ಸುಳ್ಳು ಆರೋಪ ಮಾಡಿಕೊಂಡು,ಆಧುನಿಕ ತಂತ್ರಜ್ಞಾನದಿಂದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದನ್ನು ರಾಜ್ಯ ಸರ್ಕಾರವು ತಿಳುವಳಿಕೆ ಇಲ್ಲದೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.