ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮರಾಜನಗರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕ್ರೀಡಾ ಕೂಟ ಉದ್ಘಾಟಿಸಿದರು ಬಳಿಕ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಿ. ಆಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ, ಜಿಲ್ಲೆಯು ಜಾನಪದ ಕ್ರೀಡೆಗೆ ಹೆಸರುವಾಸಿಯಾಗಿದ್ದು ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿ ಕೀರ್ತಿ ತರಬೇಕು ಎಂದರು