ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆ ನಡೆಯಲಿದೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್(ಎಐಯುಟಿಯುಸಿ)ನ ರಾಜ್ಯ ಸಮಿತಿಯ ಅಧ್ಯಕ್ಷ ಕೆ.ಸೋಮಶೇಖರ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಮಂಗಳವಾರ ಬೆಳಿಗ್ಗೆ 11:30 ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸೋಮಶೇಖರ್. ನಮ್ಮ ದೇಶದ ದುಡಿಯುವ ವರ್ಗವು ಅಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಸೇವೆ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದಿಂದ ಹೆಚ್ಚುತ್ತಿರುವ ಫ್ಯಾಸಿಸ್ಟ್ ದಾಳಿಗಳನ್ನು ಎದುರಿಸುತ್ತಿದೆ. ಈ ದಾಳಿಗಳನ್ನು ಎದುರಿ