Download Now Banner

This browser does not support the video element.

ಸಿಂಧನೂರು: ಜನಸ್ಪಂದನ ಕಚೇರಿಯಲ್ಲಿ ಎಂಎಲ್ಸಿ ಬಸನಗೌಡ ಬಾದರ್ಲಿ ಅಹವಾಲು ಸ್ವೀಕಾರ; ಖಡಕ್ ಸೂಚನೆ

Sindhnur, Raichur | Sep 21, 2025
ಜನರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವುದು ಜನ ಪ್ರತಿನಿಧಿಯಾಗಿ ನನ್ನ ಕರ್ತವ್ಯ. ನನ್ನ ಕರ್ತವ್ಯವನ್ನು ನಾನು ಚಾಚೂತಪ್ಪದೆ ನಿರ್ವಹಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಹೇಳಿದರು. ಸಿಂಧನೂರಿನ ಜನಸ್ಪಂದನ ಕಚೇರಿಯಲ್ಲಿ ಸೆ.21 ರ ರವಿವಾರ ಮಧ್ಯಾಹ್ನ 2 ಗಂಟೆಗೆ ಸಿಂಧನೂರಿನ ವಿವಿಧೆಡೆಯಿಂದ ಆಗಮಿಸಿದ್ದ ಜನರ ಅಹವಾಲುಗಳನ್ನು ಸ್ವೀಕರಿಸಿ, ತಕ್ಷಣವೇ ಸಮಸ್ಯೆಗಳ ಪರಿಹಾರಕ್ಕಾಗಿ ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದರು. ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Read More News
T & CPrivacy PolicyContact Us