ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ವ್ಯಕ್ತಿ ಒಬ್ಬರು ಮೃತಪಟ್ಟಿದ್ದು ಅವರಿಗೆ ಕೋವಿಡ್ ಪಾಸಿಟಿವ್ ದೃಡಪಟ್ಟಿದೆ. ಇಂದು ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಅವರು ಇಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯವನ್ನು ವಿಚಾರಿಸಿ ಸಾಂತ್ವಾನವನ್ನು ತಿಳಿಸಿದ್ದಾರೆ. ಆ ವ್ಯಕ್ತಿ ಕರುಳಿನ ಕ್ಯಾನ್ಸರ್ ಇಂದ ಬಳಲುತ್ತಿದ್ದು ಇದರ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾಗ ಕೋವಿಡ್ ಟೆಸ್ಟ್ ಮಾಡಿದಾಗ ಕೋವಿಡ್ ದೃಡಪಟ್ಟಿದೆ ಎಂದು ತಿಳಿದುಬಂದಿದೆ.