ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ಇಂದು ಧಾರವಾಡ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೊದಲ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪಲ್ಲವಿ ಬಿ.ಆರ್. ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಈ ಹಿಂದೆ ಹುಬ್ಬಳ್ಳಿಯ ೧ ನೇ ಹಿರಿಯ ಮತ್ತು ಸತ್ರ ನ್ಯಾಯಾಲಯ ಕೂಡಾ ಫಯಾಜ್ ಅರ್ಜಿಯನ್ನು ವಜಾಗೊಳಿಸಿತ್ತು. ನನ ಮಗಳ ಜೀವ ತೆಗೆದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಇದು ನಮ್ಮ ಮೊದಲ ಗೆಲುವು ಎಂದು ನೇಹಾಳ ತಂದೆ ನಿರಂಜನಯ್ಯ ತಿಳಿಸಿದ್ದಾರೆ.