ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ನಡೆಸಲು ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ರೂಟ್ ಮಾರ್ಚ್ ನಡೆಯಿತು. ನಗರದ ವಿಜಯಪುರ ರಸ್ತೆ, ರತ್ನಗಿರಿ ರಸ್ತೆ, ಬಸವನಹಳ್ಳಿ ರಸ್ತೆ ಹಾಗೂ ಹನುಮಂತಪ್ಪ ವೃತ್ತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ನೂರಾರು ಪೊಲೀಸರು ಪಥಸಂಚಲನೆ ನಡೆಸಿದರು. ಪಥಸಂಚಲನವು ಪೊಲೀಸ್ ಅಧೀಕ್ಷಕ ವಿಕ್ರಂ ಅಮಟೆ ಹಾಗೂ ಎಎಸ್ಪಿ ಜಯಕುಮಾರ್ ನೇತೃತ್ವದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ಪಡೆ, ನಗರದ ವಿವಿಧ ಠಾಣೆಗಳ ಸಿಬ್ಬಂದಿ ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಪಾಲ್ಗೊಂಡಿದ್ದರು. ಎರಡು ಹಬ್ಬಗಳ ಪ್ರಯುಕ್ತ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಿಸಿಟಿವಿ ನಿಗಾ ಹಾಗೂ ವಿಶೇಷ ಗಸ್ತು ವ್ಯವಸ್ಥೆ ಜಾರಿಗೆ ತರ