ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗೂಂಡಾ ಕಾಯ್ದೆಯಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತರ ಮೇಲೆ ರೌಡಿಶೀಟರ್ ತೆರೆಯಲಾಗಿದ್ದು, ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು.