ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮಂಗಳವಾರ ತಿಳಿಸಿದ್ದಾರೆ. ಮಧ್ಯಾಹ್ನ ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ ಎಂದರು.