ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಸಂಜೆ 5 ಗಂಟೆಗೆ ನಗರದ ಆಲೂರ ವೆಂಕಟರಾವ್ ಸಭಾಭವನದಲ್ಲಿ ಬ್ರಹ್ಮ ಶ್ರೀ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಣೆ ಮಾಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಹಿರಿಯ ಪರಿಸರ ಅಧಿಕಾರಿ