ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ದಾಸ್ತಾನಿನ ಮೇಲೆ ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 3.60 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಬೆಟಗೇರಿಯ ಮಂಜುನಾಥ ನಗರದ ನಿವಾಸಿ ಆಹ್ಮದ್ ಯಲಿಗಾರ ಎಂಬುವ ವರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಟ್ಟಿದ್ದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಬೆಟಗೇರಿ ಪೊಲೀಸ್ ಠಾಣೆ ಪಿಎಸ್‌ಐ ಎಲ್.ಎಂ. ಆರಿ ಹಾಗೂ ಆಹಾರ ಇಲಾಖೆ ಆಹಾರ ನಿರೀಕ್ಷಕ ಎನ್.ಆರ್.ಚಿನ್ನಪ್ಪಗೌಡ್ರ ಶುಕ್ರವಾರ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬೆಟಗೇರಿ ಭಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ ಪಡೆದಿದ್ದಾರೆ.