ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಕೊರಟಗೆರೆ ತಾಲ್ಲೂಕಿನ ಚೀಲಗಾನಹಳ್ಳಿ ಗ್ರಾಮದ ಸುಮಾರು 55 ವರ್ಷದ ನಾಗೇಂದ್ರ ಬಿನ್ ಲೇಟ್ ಗೋವಿಂದಪ್ಪ ಎಂಬ ವ್ಯಕ್ತಿಯು 2024ರ ಅಕ್ಟೋಬರ್ 14ರಂದು ಕಾಣೆಯಾಗಿದ್ದಾರೆ. ಈವೆರೆಗೂ ಇವರ ಸುಳಿವು ಸಿಕ್ಕಿಲ್ಲ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಮತ್ತು ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಹಾಗೂ ನೀಲಿ ಬಣ್ಣದ ಚೌಕುಳಿಯಿರುವ ಟವಲ್ ಧರಿಸಿದ್ದನು.