1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ಯಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು.ಕೊಡವ ಮಕ್ಕಡ ಕೂಟ ಮತ್ತು ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ ನಡೆದ ನಗರದ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಏರ್ ಮಾರ್ಷಲ್ ನಂದ ಕಾರ್ಯಪ್ಪ, ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಬಿ. ಅಯ್ಯಪ್ಪ ಸೇರಿದಂತೆ ಜನಪ್ರತಿನಿಧಿಗಳು, ನಿವೃತ್ತ ಯೋಧರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ದೇವಯ್ಯ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.ಬಳಿಕ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಬಿ ಅಯ್ಯಪ್ಪ ವರ್ಷಂಪತಿ ನಡೆಸಿಕೊಂಡು ಬರ