ಜಿಲ್ಲೆಯಲ್ಲಿ ಸೆಪ್ಟೆಂಬರ 15 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ. ಮಾಜಿ ದೇವದಾಸಿ ಮಹಿಳೆಯ ಮರು ಸಮೀಕ್ಷೆ ಕುರಿತು ಮಾಹಿತಿಯುಳ್ಳ ಪ್ರಚಾರದ ಪೋಸ್ಟರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಲಿಂಗತ್ವ ಅಲ್ಪಸಂಖ್ಯಾತರ ಬೇಸ್‍ಲೈನ್ ಸಮೀಕ್ಷೆಯು ಆಯಾ ತಾಲೂಕಿನ ಆಸ್ಪತ್ರೆಗಳಲ್ಲಿರುವ ಎ.ಆರ್.ಟಿ ಕೇಂದ್ರ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತಿದೆ. ಆದ್ದರಿಂದ ಈ ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿ ಮಹಿಳೆಯರು ಭಾಗವಹಿಸಲು ಮನವಿ