ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಅಭಿಯಾನಕ್ಕೆ ರೋಣ ತಾಲೂಕಿನಲ್ಲಿ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರೋಣ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ. ಕಂದಕೂರ ಅವರು ಹೊಳೆ ಆಲೂರು ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.