ಕರ್ನಾಟಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಅಲೆಮಾರಿಗಳ ಸಮುದಾಯಗಳ ಒಳಮೀಸಲಾತಿ ವಂಚಿತ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಬೆಳಿಗ್ಗೆ 11ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ನಾರಾಯಣರಾವ್ ಪಾರ್ಕ್ನ ಸಮೀಪ ಬೆಳಗ್ಗೆ ಸಮಾವೇಶಗೊಂಡ ಒಳಮೀಸಲಾತಿ ವಂಚಿತ ಹೋರಾಟ ಸಮಿತಿಯ ಪದಾಧಿಕಾರಿಗಳು, ಅಲೆಮಾರಿ ಜನಾಂಗದವರು ಅಲ್ಲಿಂದಡಾ.ರಾಜ್‌ಕುಮಾರ್ ರಸ್ತೆ ಮಾರ್ಗವಾಗಿ ಗಡಗಿ ಚೆನ್ನಪ್ಪ ವೃತ್ತಕ್ಕೆ ತಲುಪಿ ಅಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ, ಸ್ಟೇಷನ್ ರಸ್ತೆ ಮುಖಾಂತರ ಜಿಲ್ಲಾಧಿಕಾರಿಗ