ಪ್ರತಿಯೊಬ್ಬ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತುಕೊಂಡು ಪ್ರಾಮಾಣಿಕವಾಗಿ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ಜೆ.ಎಸ್.ಎಸ್ ಕಾಲೇಜು ಆವರಣದಲ್ಲಿರುವ ಸನ್ನಿಧಿ ಸಭಾಂಗಣದಲ್ಲಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕರ ವೃತ್ತಿ ಶ್ರೇಷ್ಠತೆಯನ್ನು ಪಡೆ