ಅತಿಥಿ ಉಪನ್ಯಾಸಕರನ್ನುನೇಮಕ ಮಾಡದ ರಾಜ್ಯ ಸರಕಾರದ ವಿರುದ್ಧ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರನಗರದ ನೀಲನಗೌಡ್ರ ಬಡಾವಣೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಎಸ್.ಎಫ್‌ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ಮಾತನಾಡಿ, ರಾಜ್ಯದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ಕೊರತೆ ಇರುವ ಕಾರಣ ಸರಕಾರ ಪ್ರತಿವರ್ಷದಂತೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿತ್ತು. ದುರದೃಷ್ಟವಶಾತ್ 2025- 26ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ತಿಂಗಳು ಕಳೆದರು ಈವರೆಗೂ ಉಪನ್ಯಾಸಕರನೇಮಕ ಮಾಡಿಲ್ಲ ಕಾರಣ ವಿದ್ಯಾರ್ಥಿಗಳಿಗೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ ಎಂದರು.