ಯಾದಗಿರಿ ನಗರದ ಜಿಲ್ಲಾ ಪಂಚಾಯಿತಿಯಲ್ಲಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಮುಖ್ಯ ಕಾರ್ಯನಿರ್ವಕ ಅಭಿಯಂತರ ಪ್ರಕಾಶ ಕುಲಕರ್ಣಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯಿಂದ ಜಿಲ್ಲಾಧ್ಯಕ್ಷ ವಿಶ್ವನಾಥ ನಾಯಕ ನೇತೃತ್ವದಲ್ಲಿ ಬುಧವಾರ ಮಧ್ಯಾನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಪ್ರಕಾಶ್ ಕುಲಕರ್ಣಿ ಅವರು ತಮಗೆ ಬೇಕಾದ ಗುತ್ತಿಗೆದಾರರಿಗೆ ಮತ್ತು ಏಜೆನ್ಸಿ ಗಳಿಗೆ ಕಾಮಗಾರಿಗಳನ್ನು ಟೆಂಡರ್ ಕರೆಯದೆ ನೀಡಿ ಬೇಕಾಬಿಟ್ಟಿಯಾಗಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಮೊಗದಂಪುರ ಸೇರಿದಂತೆ ಅನೇಕರಿದ್ದರು