ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ನಿಮಿತ್ಯವಾಗಿ ನಡೆಯುವ ಶಾಂತಿ, ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ನಗರದಲ್ಲಿ ಮುಸ್ಲಿಮ ಸಮಾಜದ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ನಗರದ ವಿವಿಧೆಡೆ ಜರುಗಿದ ಬೃಹತ್ ಮೆರವಣಿಗೆಯಲ್ಲಿ ಹಿರಿಯರು, ಕಿರಿಯರು ಎನ್ನದೆ ಸಂಭ್ರಮ, ಸಡಗರಗಳಿಂದ ಎಲ್ಲರೂ ಭಾಗವಹಿಸಿದ್ದರು. ಹೆಣ್ಣುಮಕ್ಕಳು ಭಾರತದ ದ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಭಾಗಿಯಾಗಿದ್ದು ಎಲ್ಲರ ಗಮನ ಸೆಳೆಯಿತು.