ಮಲ್ಲೇಶ್ವರಂನಲ್ಲಿ ಸಂಜೆ 5 ಗಂಟೆ ಸುಮಾರಿಗೆ ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದ್ದಾರೆ. ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಆಯೋಜಿಸಿದ ಡೆಂಟಿಸ್ಟ್ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು.