ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ ಅಧ್ಯಕ್ಷತೆ ರಾಜ್ಯದ್ಯಂತ ನಡೆಯುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬ್ರಾಹ್ಮಣ ಸಮಾಜವನ್ನು ಅನೇಕ ಪಂಗಡಗಳಿಗೆ ವಿಭಜಿಸಿರುವ ಕುರಿತು ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಆಕ್ಷೇಪಣೆ ಸಲ್ಲಿಸಿದ್ದಾರೆ ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್ ನೇತೃತ್ವದಲ್ಲಿ ಸಿದ್ದಾರ್ಥ ಲೇಔಟ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಪರಾ ಜಿಲ್ಲಾಧಿಕಾರಿ ಶಿವರಾಜು ರವರಿಗೆ ಮನವಿ ಸಲ್ಲಿಸಿ ವಿಭಜನೆಗಳಿಂದ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸರ್ಕಾರದ ಸೌಲತ್ತು ತಲುಪುವಲ್ಲಿ ತೊಂದರೆ ಉಂಟಾಗುತ್ತದೆ