ಕಲಬುರಗಿ : ತೊಗರಿಯ ಕಣಜ ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಟಿಯಿಂದ ಸಾಕಷ್ಟು ಪ್ರಮಾಣದಲ್ಲಿ ತೊಗರಿ ಸೇರಿದಂತೆ ಇನ್ನಿತರ ಬೆಳೆಗಳು ಸಂಪೂರ್ಣ ಕೈಕೊಟ್ಟಿದ್ದು, ಅತಿವೃಷ್ಟಿಯಿಂದ ಹಾಳಾದ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಂಬರಾಯ ಅಷ್ಟಗಿ ಆಗ್ರಹಿಸಿದ್ದಾರೆ.. ಆ24 ರಂದು ಬೆಳಗ್ಗೆ 11.30 ಕ್ಕೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಅನ್ನದಾತರ ಬದುಕು ದುಸ್ತರಗೊಂಡಿದ್ದು, ಎಸ್‌ಡಿಆರ್‌ಎಫ್ ನಿಯಮದಡಿ ಪ್ರತಿ ಎಕರೆಗೆ 25 ಸಾವಿರ ರೂ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಅಂಬರಾಯ್ ಅಷ್ಟಗಿ ಒತ್ತಾಯಿಸಿದ್ದಾರೆ.