ಕೊಪ್ಪ ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಶಮಿತಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ. ಏಳು ದಿನಗಳೊಳಗೆ ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಜೂನ್ 29ರಂದು ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿ ಬಾಲಕಿ ಶಮಿತಾ, ಶೌಚಾಲಯದಲ್ಲಿ ವೇಲ್ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ನಡೆದು ಎರಡು ತಿಂಗಳು ಕಳೆದರೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಹೋರಾಟ ಇನ್ನು ನಡೆಯುತ್ತಿದೆ. ಈ ಪ್ರಕರಣ ಕೊಪ್ಪದಲ್ಲಿ ಭಾರೀ ಆಕ್ರೋಶ ಮೂಡ