ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಪೊಲೀಸ್ ಆಯುಕ್ತ ಡಾ|| ಶರಣಪ್ಪ ಎಸ್.ಡಿ. ಅವರು ಡಿ.ಜೆ ಹಾಗೂ ಸೌಂಡ್ ಸಿಸ್ಟಮ್ ಮಾಲೀಕರ ವಿಶೇಷ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ನಿರ್ದೇಶನ ಹಾಗೂ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು. ನಿಗದಿತ ಡೆಸಿಬಲ್ ಮಿತಿಯೊಳಗೆ ಮಾತ್ರ ಸೌಂಡ್ ಸಿಸ್ಟಮ್ ಬಳಸಬೇಕು, ಮಿತಿಯನ್ನು ಮೀರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.ನಗರದ ಶಾಂತಿ, ಸಾಂಸ್ಕೃತಿಕ ಸೌಹಾರ್ದತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕೆಂದು ಅವರು ವಿನಂತಿಸಿದರು. ಸಭೆಯಲ್ಲಿ ಹಲವಾರು ಡಿ.ಜೆ ಹಾಗೂ ಸೌಂಡ್ ಸಿಸ್ಟಮ್ ಮಾಲೀಕರು ಪಾಲ್ಗೊಂಡು ಅಧಿಕಾರಿಗಳಿಗೆ ಭರವಸೆ ನೀಡಿದರು.