ತೋಟದೊಳಗಿನ ಕಾಲುದಾರಿಯಲ್ಲಿ ಬರುವಂತಹ ಸಂದರ್ಭದಲ್ಲಿ ಬಿದ್ದಿದ್ದ ತೆಂಗಿನ ಕಾಯಿಯನ್ನು ತೆಗೆದುಕೊಂಡ ಕಾರಣಕ್ಕೆ ಗುದ್ದಲಿಯಿಂದ ಕಾಲು ಕಡಿದು ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಘಟನೆಯ ಸಂಬಂಧ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಮಾಹಿತಿ ಕೊಟ್ಟಿದ್ದಾರೆ. ಇದು ಆರೋಪಿಗಳನ್ನು ಬಂಧಿಸಲು ಪೊಲೀಸರು ಅರಸಹಸ ಪಟ್ಟಿದ್ದು ತುಮಕೂರು ಜಿಲ್ಲೆಯ ಕೆಬಿ ಕ್ರಾಸ್ ಬಳಿಯಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.