ಚಾಮರಾಜನಗರದ ಜಿಲ್ಲಾ ನ್ಯಾಯಾಲಯದ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಪ್ರಭಾವತಿ ಮಾತನಾಡಿ ಸೆ.13 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಅದಾಲತ್ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಅದಾಲತ್ ನಡೆಯಲಿದೆ. ಈ ಬಾರಿ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು