ಹುಬ್ಬಳ್ಳಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನ ಪೊಲೀಸರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯವರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ನಲ್ಲಿ ಅಬ್ದುಲ್ ಕಲಾಂ ಹಾಗೂ ಇಬ್ರಾಹಿಂ ಎಂಬ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ತಿರುಗಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿದ್ದು ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಜಿಲ್ಲಾ ಮಕ್ಕಳ ರಕ್ಷಣೆ ಘಟಕದ ಅಧಿಕಾರಿ ಅವರ ಸಹಕಾರದೊಂದಿಗೆ ಮಕ್ಕಳನ್ನು ಉಣಕಲ್ ದಲ್ಲಿರುವ ಬಾಲಕರ ಬಾಲ ಮಂದಿರಕ್ಕೆ ಒಪ್ಪಿಸಿರುತ್ತಾರೆ.