ಮದ್ಯಪಾನ ಮಾಡಿ ಆಂಬುಲೆನ್ಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ದಂಡ ವಿಧಿಸಲಾಗಿದೆ.ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆಂಬುಲೆನ್ಸ್ ಚಾಲಕನೊಬ್ಬ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ. ಆತನನ್ನ ಪರೀಕ್ಷಿಸಿದಾಗ ಆತ ಮದ್ಯಪಾನ ಮಾಡಿರುವುದು ಕಂಡುಬಂದಿದೆ.ಕೂಡಲೇ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಈ ಕುರಿತಾದ ಮಾಹಿತಿ ಭಾನುವಾರ ಲಭ್ಯವಾಗಿದೆ.