ರಾಜ್ಯ ಸರ್ಕಾರ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣ ಮಾಡಲು ಹೊರಟಿದೆ. ಆದರೆ ವಿಜಯಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುತ್ತಿರುವುದು ಖಂಡನಿಯ, ಸರ್ಕಾರ ಸಂಪೂರ್ಣವಾಗಿ ಸರ್ಕಾರಿ ವೈದ್ಯಕ್ಕೆ ಮಹಾವಿದ್ಯಾಲಯ ನಿರ್ಮಾಣ ಮಾಡಬೇಕು. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಿದರೆ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಕೆಲವು ಸಚಿವರ ನಿರ್ಣಯದಿಂದ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ಬುಧವಾರ ಬೆಳಗ್ಗೆ 11ಗಂಟೆ ಸುಮಾರಿಗೆ ರೈತ ಮುಖಂಡ ಅರವಿಂದ ಕುಲಕರ್ಣಿ ಮಾಧ್ಯಮ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.