ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌದದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಂಘದ ರಾಜ್ಯಾಧ್ಯಕ್ಷರಿಗೆ ಅಭಿನಂದನೆ, ಉತ್ತಮ ನೌಕರರಿಗೆ ಸೇವಾ ಪ್ರಶಸ್ತಿ ಪ್ರದಾನ, ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಸರ್ಕಾರಿ ನೌಕರರ ಸಮಾವೇಶ ಮತ್ತು ಸರ್ವ ಸದ್ಯಸರ ಸಾಮಾನ್ಯ ಸಭೆ ಹಮ್ಮಿಕೊಂಡಿದ್ದು ಸಿರಿಗೆರೆ ತರಳಬಾಳು ಬೃಹನ್ಮಠದ ಪರಪೂಜ್ಯ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಉದ್ಘಾಟಿಸಿ ಮಾತನಾಡಿದ್ದು ಶಾಸಕ ಎಂ ಚಂದ್ರಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದಾರೆ