ಮನೆ ಕಳ್ಳತನ ಮಾಡಿದ್ದ ಆರೋಪಿಯ ಬಂಧಿಸಿ 7 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುದಗೆರೆ ಪ್ಲಾಂಟೇಷನ್ ನಲ್ಲಿನ ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕಳ್ಳತನ ಮಾಡಿದ್ದರು. ಈಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸದರಿ ಪ್ರಕರಣದ ತನಿಖೆ ನಡೆಸಿ ಓರ್ವ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿ ಸುಮಾರು 7 ಲಕ್ಷ ರೂ ಮೌಲ್ಯದ, 70.15 ಗ್ರಾಂ ತೂಕದ ಚಿನ್ನಾಭರಣಗಳನ್ನ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಂಗಳವಾರ ಪ್ರಕಟಣೆ ಮೂಲಕ ತಿಳಿಸಲಾಗಿದೆ.