ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯಲ್ಲಿ ಆಪರೇಷನ್ ಸಿಂಧೂರ್ ವಿಜಯೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಮೇಘಾಲಯ ರಾಜ್ಯಪಾಲ ಸಿ ಎಚ್ ವಿಜಯಶಂಕರ್ ನಮ್ಮ ಸಹೋದರಿಯರ ಸಿಂದೂರ ಅಳಿಸಿದ್ದವರ ವಿರುದ್ಧ ವಿಜಯ ಸಾಧಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ದಿಟ್ಟ ನಾಯಕತ್ವ ಹಾಗೂ ಭಾರತೀಯ ಸೇನೆಯ ಪ್ರಚಂಡ ಸಾಮರ್ಥ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ, ಶ್ರೀ ಸಿದ್ದಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿ, ಶ್ರೀ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸಂಸದರಾದ ಡಾ. ಸಿ. ಎನ್. ಮಂಜುನಾಥ್,