ಜಾತಿ, ಧರ್ಮ, ಪಕ್ಷ ಎಲ್ಲವನ್ನು ಮೀರಿ ರಾಜ್ಯದ ಸಮಸ್ಥ ಜನತೆ ಪೂಜಿಸುವ ಧರ್ಮಸ್ಥಳದ ಶ್ರದ್ದಾ ಕೇಂದ್ರದ ಬಗ್ಗೆ ಕೆಲವು ಕಾಣದ ಕೈಗಳು ಅಪಪ್ರಚಾರ ನಡೆಸುತ್ತಿರುವುದು ಜೆಡಿಎಸ್ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ. ಪವಿತ್ರ ತೀರ್ಥ ಕ್ಷೇತ್ರದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಜೆಡಿಎಸ್ ಪಕ್ಷದಿಂದ ಆ.31 ರಂದು ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದೆ. ರಾಜ್ಯದ ಸಮಸ್ಥ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಅಂದು ಧರ್ಮಸ್ಥಳದಲ್ಲಿ ನಡೆಯುವ ಸತ್ಯಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ ಎಂದು, ಕೊಪ್ಪಳ ಜಿಲ್ಲೆಯ ಸಾವಿರಾರು ಕಾರ್ಯಕರ್ತರು ಭಾಗವಹಿಸಬೇಕು ಎಂದು ಜೆಡಿಎಸ್ ಮುಖಂಡ ಶರಣಪ್ಪ ಅಗ್ರಹಿಸಿದರು