ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಡಾ. ಡಿಜಿ ಸಾಗರ ಅವರನ್ನು ವಿಧಾನ ಪರಿಷತ್ ಸದಸ್ಯರ ಅಂತಿಮ ಆಯ್ಕೆ ಪಟ್ಟಿಯಿಂದ ಕೈ ಬಿಟ್ಟಿರುವ ಹಿನ್ನೆಲೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಶಹಾಪುರ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು ಬಸವೇಶ್ವರ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರಾಜ್ಯ ಹೆದ್ದಾರಿ ತಡೆದು ಕಾಂಗ್ರೆಸ್ ಸರ್ಕಾರ ಎತ್ತುಕೊಂಡು ಡಿಜಿ ಸಾಗರ್ ಅವರನ್ನು ವಿಧಾನಪರಿಷತ್ ಸದಸ್ಯರನ್ನು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು ಈ ಸಂದರ್ಭದಲ್ಲಿ ತಾಲೂಕಿನ ದಲಿತ ಸಂಘಟನೆಯ ಮುಖಂಡರು ಭಾಗವಹಿಸಿದ್ದರು