ತುಮಕೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ನಡೆಯುವ 40 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನ ಆಗಸ್ಟ್ 8 ಒಳಗೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 12 ರ ಸಮಯದಲ್ಲಿ ರಸ್ತೆ ಸುರಕ್ಷತಾ ಸಭೆ ನಡೆಸಿ ಬಳಿಕ ಮಾತನಾಡಿದರು. ಸಭೆ ಬಳಿಕ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪೊಲೀಸ್ ಅಧಿಕಾರಿಗಳೊಂದಿಗೆ ಚಿಕ್ಕಹಳ್ಳಿ, ಹಿರೇಹಳ್ಳಿ ಟಿವಿಎಸ್ ಕ್ರಾಸ್, ಪಂಡಿತನಹಳ್ಳಿ ಗೇಟ್ ಮತ್ತು ಕ್ಯಾತ್ಸಂದ್ರ ಟೋಲ್ ಬಳಿ ಗುರುತಿಸಲಾಗಿರುವ ಅಪಘಾತ ಸ್ಥಳಗಳನ್ನ ಪರಿಶೀಲಿಸಿದರು.