ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರಲು ಕೆಲವರು ಷಡ್ಯಂತ್ರ ನಡೆಸಿದ್ದು ಇದರ ಹಿಂದಿರುವವರನ್ನು ಬಂಧಿಸಬೇಕೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಆಗ್ರಹಿಸಿದರು. ಪಟ್ಟಣದ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಬಳಿ ಶ್ರೀಕ್ಷೇತ್ರ ಧರ್ಮಸ್ಥಳ ಚಲೋ ಸಮಾವೇಶಕ್ಕೆ ಭಾಗವಹಿಸಲು 10 ಬಸ್‍ಗಳು, 50 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದ ಕಾರ್ಯಕರ್ತರಿಗೆ ಚಾಲನೆ ನೀಡಿ ಭಾನುವಾರ ಮಾತನಾಡಿದ ಅವರು ಸಂಚು ರೂಪಿಸುತ್ತಿರುವವರ ಮುಖವಾಡ ಬಯಲಾಗಿದೆ, ಧರ್ಮ ಉಳಿಯಬೇಕಾದರೆ ಹಿಂದೂಗಳ ಒಗ್ಗಟ್ಟು ಮುಖ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ದೇವಸ್ಥಾನಗಳ ವಿಷಯದಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿದರು.