ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ದೊಡ್ಡ ತೊಂದರೆ ಉಂಟಾಗಿದೆ. ಇದರ ಪರಿಣಾಮವಾಗಿ ಕೊಪ್ಪ ತಾಲೂಕಿನ ಕುದುರೆಗುಂಡಿ ಬಳಿ ರಸ್ತೆ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಇಬ್ಬರು ಪ್ರತ್ಯೇಕ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಘಟನೆ ಗುರುವಾರ ಮಧ್ಯಾಹ್ನ 1 ಗಂಟೆ ಹಾಗೂ ಮುಂಜಾನೆ 8:00 ಸುಮಾರಿಗೆ ನಡೆದಿದ್ದು, ಗಾಯಗೊಂಡ ಸವಾರರನ್ನು ತಕ್ಷಣ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕುದುರೆಗುಂಡಿ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಪ್ರತಿದಿನವೂ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಹೊಸದಾಗಿ ಈ ರಸ್ತೆಯಲ್ಲಿ ಸಂಚರಿಸುವವರು ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ರಸ್ತೆ ಗುಂಡಿಗ