ಎಂ ಎಂ ಜೋಶಿ ಕಣ್ಣಿನ ಆಸ್ಪತ್ರೆಯಿಂದ ನೇತ್ರದಾನದ ಕುರಿತು ಮಾನ್ವಿ ಪಟ್ಟಣದಲ್ಲಿ ಜನಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥೆ ಸುಧಾ ಪಾಟೀಲ್ ತಿಳಿಸಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಶನಿವಾರ ಮಧ್ಯಾನ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇದೇ ಸೆಪ್ಟೆಂಬರ್ 8ನೇ ತಾರೀಕು ಮಾನ್ವಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಜಾಥಾ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾದ ಮೂಲಕ ಸಂಚರಿಸಿ ನೇತ್ರದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು. ಆಸ್ಪತ್ರೆಯ ವೈದ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.