ಆಗಸ್ಟ್ 27ರಂದು ಗಣೇಶ ಚತುರ್ಥಿ ಪ್ರಯುಕ್ತ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಪರಿಸರ ಸ್ನೇಹಿಯಾಗಿ ವಿಸರ್ಜಿಸಲು ಚಿತ್ರದುರ್ಗ ನಗರಸಭೆಯು ನಗರದ ವಿವಿಧೆಡೆ ತಾತ್ಕಾಲಿಕವಾಗಿ ನೀರಿನ ತೊಟ್ಟಿಗಳನ್ನು ವ್ಯವಸ್ಥೆ ಮಾಡಿದೆ. ಗಣೇಶ ಚತುರ್ಥಿ ಪ್ರಯುಕ್ತ ಪ್ಲಾಸ್ಟರ್ ಆಪ್ ಪ್ಯಾರಿಸ್ ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂಹತಹ ಯಾವುದೇ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ಸರ್ಕಾರದಿಂದ ನಿಷೇಧಿಸಲಾಗಿದೆ. ಸಾರ್ವಜನಿಕರು ಮಣ್ಣಿನಿಂದ ನಿರ್ಮಿಸಿದ ನೈಸರ್ಗಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ ಪರಿಸರ ಸ್ನೇಹಿಯಾಗಿ ಗಣೇಶ ಚತುರ್ಥಿ ಆಚರಿಸಲು ಕೋರಿದೆ.